ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

ಮಡಿಕೇರಿ : ರಾಷ್ಟ್ರೀಯ ಮತದಾರರ ದಿನ ಪ್ರಯುಕ್ತ ಜನವರಿ, 25 ರಂದು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು 'ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ' ಎಂಬ ಧ್ಯೇಯ ವಾಕ್ಯದೊಂದಿಗೆ ಜಿಲ್ಲಾಡಳಿತ ವತಿಯಿಂದ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ಶಾಲಾ-ಕಾಲೇಜು ಮುಖ್ಯಸ್ಥರು ತಮ್ಮ ಕಚೇರಿಯಲ್ಲಿ, ಶಾಲಾ-ಕಾಲೇಜುಗಳಲ್ಲಿ ಜನವರಿ, 25 ರಂದು ಬೆಳಗ್ಗೆ 11.30 ಗಂಟೆಗೆ ಭಾರತ ಚುನಾವಣಾ ಆಯೋಗ ಸಿದ್ದಪಡಿಸಿರುವ ವೋಟರ್ ಪ್ಲೆಡ್ಜ್ನೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.