ಜ.29ರಿಂದ ಕರ್ನಾಟಕ, ದೆಹಲಿಯಲ್ಲಿ ಲಘು ಮಳೆ ಮುನ್ಸೂಚನೆ : ಹವಾಮಾನ ಇಲಾಖೆ ಎಚ್ಚರಿಕೆ

ಜ.29ರಿಂದ ಕರ್ನಾಟಕ, ದೆಹಲಿಯಲ್ಲಿ ಲಘು ಮಳೆ ಮುನ್ಸೂಚನೆ : ಹವಾಮಾನ ಇಲಾಖೆ ಎಚ್ಚರಿಕೆ

ವದೆಹಲಿ : ಕರ್ನಾಟಕ, ದೆಹಲಿಯಲ್ಲಿ ಜನವರಿ 29 ರಂದು ಲಘು ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಹೇಳಿದೆವದೆಹಲಿ

ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಕರ್ನಾಟಕ, ದೆಹಲಿಯಲ್ಲಿ ಜನವರಿ 29 ರಂದು ಲಘು ಮಳೆಯಾಗಲಿದೆ. ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ . ರಾಜ್ಯಾದ್ಯಾಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆಗಳಿವೆ. ಹರದನಹಳ್ಳಿ, ಹಾರಂಗಿ, ಕೃಷ್ಣರಾಜಸಾಗರ, ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ, ಗೋಣಿಕೊಪ್ಪಲು, ಕೆವಿಕೆ, ಮೈಸೂರು, ಚಿಕ್ಕಮಗಳೂರು, ಸುಂಟಿಕೊಪ್ಪ, ಕೊಪ್ಪ, ಮಡಿಕೇರಿಯಲ್ಲೂ ಮಳೆಯಾಗಿದೆ.

ದೆಹಲಿ ಗರಿಷ್ಟ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಸಿದೆ. ಹೊಸ ಪಾಶ್ಚಿಮಾತ್ಯ ಅಡಚಣೆಯು ಜನವರಿ 29 ರಂದು ಲಘು ಮಳೆಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ದೆಹಲಿಯಲ್ಲಿ ಲಘು ಮಳೆ ಮುನ್ಸೂಚನೆ ಇರುವುದಿಂದ ಮುಂದಿನ ದಿನಗಳ ಥಂಡಿ ವಾತಾವರಣ ಮುಂದುವರಿಯುವ ಸಾಧ್ಯತೆ ಹೆಚ್ಚಾಗುವ ಸಾಧ್ಯತೆಯೂ ಇದೆ. ರಾಜ್ಯದ ಜನರು ಮಳೆ ಬಗ್ಗೆ ಎಚ್ಚರಿಕೆ ವಹಿಸುವುದು ಮುಖ್ಯವಾಗಿದೆ.