ಜ.31ʼರವರೆಗೆ ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿಗಳಿಗೆ ರಜೆ ವಿಸ್ತರಣೆ : ಸಚಿವ ಬಿ.ಸಿ. ನಾಗೇಶ್‌

ಜ.31ʼರವರೆಗೆ ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿಗಳಿಗೆ ರಜೆ ವಿಸ್ತರಣೆ : ಸಚಿವ ಬಿ.ಸಿ. ನಾಗೇಶ್‌

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಳವಾಗ್ತಿದ್ದು, ಬೆಂಗಳೂರಿನಲ್ಲಿ ಜನವರಿ 31ರವರೆಗೆ ರಜೆ ವಿಸ್ತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಅಂದ್ಹಾಗೆ, ಕೊರೊನಾ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 1 ರಿಂದ 9 ನೇ ತರಗತಿವರೆಗೆ 2 ವಾರಗಳ ಕಾಲ ಅಂದ್ರೆ 19ರವರೆಗೆ ರಜೆ ನೀಡುವುದಾಗಿ ಆದೇಶ ಹೊರಡಿಸಿತ್ತು. ಸಧ್ಯ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಜೆ ವಿಸ್ತರಿಸಿದೆ.

ಈ ಕುರಿತು ಮಾತನಾಡಿದ ಶಿಕ್ಷಣ ಸಚಿವರು, '10, 11 ಮತ್ತು 12 ತರಗತಿಗಳು ಇದೇ ರೀತಿ ಮುಂದುವರೆಯುತ್ತವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನ ನೋಡಿಕೊಂಡು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸದ್ಯಕ್ಕೆ ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ಪ್ರಮಾಣ ಕಡಿಮೆ ಇದೆ' ಎಂದರು.