ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್‌- ಬಿ ಎಸ್ ಯಡಿಯೂರಪ್ಪ ಭೇಟಿ

ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ: ಜಗದೀಶ್ ಶೆಟ್ಟರ್‌- ಬಿ ಎಸ್ ಯಡಿಯೂರಪ್ಪ ಭೇಟಿ

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿತ್ತು.

ಇದೀಗ ದೆಹಲಿಯಿಂದ ವಾಪಸಾಗಿರುವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮಾಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಶುಕ್ರವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದ ಶೆಟ್ಟರ್ ಯಡಿಯೂರಪ್ಪರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದರು.

ಒಂದಿಷ್ಟು ರಾಜಕೀಯ ಪಕ್ಷದ ಬಗ್ಗೆ ವಿವರಣೆ ನೀಡಿದ್ದ ಶೆಟ್ಟರ್, ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ನಂತರ ಅಭ್ಯರ್ಥಿಗಳ ಪರ ವಕಾಲತ್ತು ವಹಿಸಿ ಸಹೋದರ ಪ್ರದೀಪ್ ಶೆಟ್ಟರ್‌ಗೆ ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡಿದ್ದರು.