ಜನ ಬಲ ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ: ರಾಹುಲ್ ಗಾಂಧಿ

ಜನ ಬಲ ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ: ರಾಹುಲ್ ಗಾಂಧಿ

ನವದೆಹಲಿ  ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೇ ಮೂರು ಕೃಷಿ ಕಾಯ್ದೆಗಳನ್ನು ಜಾರಿ ಮಾಡಿ ಈಗ ಮತ್ತೊಮ್ಮೆ ಚರ್ಚೆ ಇಲ್ಲದೇ ಅದೇ ಕಾಯ್ದೆಗಳನ್ನು ರದ್ದುಗೊಳಿಸಲಾಗಿದೆ. ಇದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ‌ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಲಿದೆ ಎಂದು ನಾನು ಹಿಂದೆಯೇ ಹೇಳಿದ್ದೆ‌. ಈ ಕಾಯ್ದೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರಕ್ಕೆ ಭಯವಿದೆ. ರೈತ ಹೋರಾಟವು ದೇಶದ ಒಟ್ಟಾರೆ ಜನಸಮುದಾಯವನ್ನು ಪ್ರತಿನಿಧಿಸಿದೆ‌. ಹೀಗಾಗಿ ಕೇಂದ್ರ ಸರ್ಕಾರ ಜನಬಲಕ್ಕೆ ಹೆದರಿದೆ. ಹಾಗೂ ಮುಂಬರುವ ‍ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.