ಜನರ ಉತ್ತಮ ಭವಿಷ್ಯದ ಬದುಕನ್ನು ನಿರ್ಮಿಸುವ ಸರಕಾರ ನಮ್ಮದು: ಸಿಎಂ ಬೊಮ್ಮಾಯಿ
ಬೆಳಗಾವಿ: ರಾಜ್ಯದ ಜನರ ಉತ್ತಮ ಭವಿಷ್ಯದ ಬದುಕನ್ನು ನಿರ್ಮಿಸುವ ಸರಕಾರ ನಮ್ಮದು. ಈ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಸರಕಾರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಬೆಳಗಾವಿಯಲ್ಲಿ ಗುರುವಾರ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯೋಜಿಸಿದ್ದ ‘ ಸರ್ವರಿಗೂ ಉದ್ಯೋಗ’, ಹಾಗೂ ‘ಬೆಳಗಾವಿ ಉದ್ಯೋಗ ಮೇಳ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದು ಪ್ರಚಾರಕ್ಕಾಗಿ ಮಾಡಿದ ಮೇಳವಲ್ಲ. ಒಂದೇ ಕಡೆ ಎರಡು ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಸಿಗುತ್ತದೆ ಎಂಬುದು ಸಾಮಾನ್ಯದ ಮಾತಲ್ಲ. ಸರಕಾರ ಆಯೋಜಿಸಿರುವ ಮೇಳದ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಅಭಯ ಪಾಟೀಲ ಉಪಸ್ಥಿತರಿದ್ದರು.