ಜನರೇ ಎಚ್ಚರ : ನಾಳೆ ಬೆಂಗಳೂರಿನಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್

ಜನರೇ ಎಚ್ಚರ : ನಾಳೆ ಬೆಂಗಳೂರಿನಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚರಿಸುತ್ತಿರುವ ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಆಗ್ರಹಿಸಿ ನಾಳೆ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸಂಪೂರ್ಣ ಬಂದ್ ಮಾಡಲಿದ್ದಾರೆ.

ಈ ಹಿನ್ನಲೆ ಮಾ.20 ರಂದು ಬೆಂಗಳೂರಲ್ಲಿ ಆಟೋ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ್ದನ್ನು ನಾವು ಖಂಡಿಸುತ್ತೇವೆ, ಸಾರಿಗೆ ಇಲಾಖೆ ಓಲಾ, ಉಬರ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.ಕೂಡಲೇ ರ್ಯಾಪಿಡೋ ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಾ.20 ರಂದು ನಗರದಲ್ಲಿ ಆಟೋ ಸೇವೆ ಇರಲ್ಲ. ಅಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕುತ್ತೇವೆ. ಈ ಮೂಲಕ ಸರ್ಕಾರದ ಗಮನ ಸೆಳೆಯುತ್ತೇವೆ, ಈ ಕೂಡಲೇ ಸರ್ಕಾರ ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು, . ಇದರಿಂದ ಆಟೋ ಚಾಲಕರ ಆದಾಯಕ್ಕೆ ಹೊಡೆತ ಬಿದ್ದಿದೆ ಎಂದು ಆಗ್ರಹಿಸಿದ್ದಾರೆ.

ರ್ಯಾಪಿಡೋ ಬೈಕ್ ಗಳ ವಿರುದ್ಧ ಸಮರ ಸಾರಿದ್ದಾರೆ ಟ್ಯಾಕ್ಸಿ ಹಾಗೂ ಆಟೋ ಚಾಲಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರು.. ಅಲ್ಲದೇ ಬೈಕ್ಗಳ ಓಡಾಟಕ್ಕೆ ನಿಷೇಧ ಹೇರುವಂತೆ ಸಾಕಷ್ಟು ಬಾರಿ ಆಗ್ರಹಿಸಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.