ಜನವರಿ 29ರಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೊಳ್ಳಲು ಕೊನೆಗೂ ಕಾಲ ಕೂಡಿ ಬಂದಿದೆ.
ಜನವರಿ 29ರಂದು ಮೈಸೂರು ತಾಲೂಕಿನ ಹಾಲಾಳು ಗ್ರಾಮದಲ್ಲಿ ಎರಡೂವರೆ ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ ಈ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.
ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವಿಷ್ಣು ಸ್ಮಾರಕ ಭವನದ ಶಂಕುಸ್ಥಾಪನೆ ನೆರವೇರಿದ್ದು, 11 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. ಒಟ್ಟು 5.5 ಎಕರೆ ಪೈಕಿ ಎರಡೂವರೆ ಎಕರೆ ಜಾಗದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ತಲೆಯೆತ್ತಿದೆ.