ಜನವರಿ ಅಂತ್ಯಕ್ಕೆ 5 ಕೋಟಿ ಆಯುಷ್ಮಾನ್ ಕಾರ್ಡ್ ವಿತರಣೆ: ಸಚಿವ ಸುಧಾಕರ್
ಹಾಸನ: ಆಯುಷ್ಮಾನ್ ಭಾರತ್ ಯೋಜನೆಯಡಿ 1.10 ಕೋಟಿಗೂ ಅಧಿಕ ಜನರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ಸಿದ್ದಪಡಿಸಿದ್ದು, ಡಿ.9ರಂದು ಸಿಎಂ ಬಸವರಾಜ ಬೊಮ್ಮಾಯಿ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಆರೋಗ್ಯ ಇಲಾಖೆ & ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಒಂದು ವಿಧಾನಸಭಾ ಕ್ಷೇತ್ರದಲ್ಲಿ 1,000 ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಜನವರಿ ಅಂತ್ಯಕ್ಕೆ ರಾಜ್ಯದ 5 ಕೋಟಿ ಕಾರ್ಡ್‌ಗಳನ್ನು ನೀಡುವ ಗುರಿ ಇದೆ ಎಂದರು.