ಜನವರಿಯಿಂದ 'ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಯೋಜನೆಗೆ ಚಾಲನೆ

ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮನೆಬಾಗಿಲಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ನೆಗಡಿ, ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಂದ ಹಿಡಿದು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಗಂಭೀರ ಕಾಯಿಲೆಗಳಿಗೂ ಗ್ರಾಮೀಣ ಜನರ ಮನೆ ಬಾಗಿಲಿಗೇ ಜನವರಿಯಿಂದ ವೈದ್ಯಕೀಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದೆ.