ಜನವರಿಯಿಂದ ವಿದ್ಯುತ್ ಪ್ರೀಪೇಯ್ಡ್ ಮೀಟರ್ ಜಾರಿ, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ ಅಳವಡಿಕೆ

ಬೆಂಗಳೂರು: ವಿದ್ಯುತ್ ನಲ್ಲಿಯೂ ಪ್ರಿಪೇಯ್ಡ್ ಮೀಟರ್ ಅಳವಡಿಸುವ ಯೋಜನೆಯನ್ನು ಜನವರಿಯಿಂದ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮಾತ್ರ ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ವಿದ್ಯುತ್ ಮೀಟರ್ ಅಳವಡಿಕೆಯಿಂದ ಎಸ್ಕಾಂಗಳಿಗೆ ಬಿಲ್ ಪಾವತಿಯಲ್ಲಿ ತಡವಾಗುವುದಿಲ್ಲ ಎಂದ ಅವರು, ಕೃಷಿ ಪಂಪ್ಸೆಟ್ ಗಳಿಗೆ ಸೋಲಾರ್ ಅಳವಡಿಕೆ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಕೆಲವು ಮಾಹಿತಿ ಕೋರಲಾಗಿದೆ. ಉತ್ತರ ಬಂದ ಕೂಡಲೇ ಯೋಜನೆ ಜಾರಿಗೊಳಿಸಲಿದ್ದು, ಎರಡು ಲಕ್ಷ ರೈತರಿಗೆ ಅನುಕೂಲವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ