ಜನಸಂಕಲ್ಪ ಯಾತ್ರೆ ಬಿಟ್ಟು ದೆಹಲಿಗೆ ದೌಡಾಯಿಸಿದ ಯಡಿಯೂರಪ್ಪ; ಕಾರಣ ನೀಡಿದ ಮಾಜಿ ಸಿಎಂ

ಜನಸಂಕಲ್ಪ ಯಾತ್ರೆ ಬಿಟ್ಟು ದೆಹಲಿಗೆ ದೌಡಾಯಿಸಿದ ಯಡಿಯೂರಪ್ಪ; ಕಾರಣ ನೀಡಿದ ಮಾಜಿ ಸಿಎಂ

ವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಜನಸಂಕಲ್ಪ ಯಾತ್ರೆ ನಡುವೆಯೇ ದಿಢೀರ್ ದೆಹಲಿಗೆ ದೌಡಾಯಿಸಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಬೀದರ್ ನ ಔರಾದ್ ನಲ್ಲಿ ಬಿಜೆಪಿ ಜನಸಂಕಲ್ಪ ಬೃಹತ್ ಸಮಾವೇಶ ನಡೆಯುತ್ತಿದ್ದು, ಬೀದರ್ ಗೆ ತೆರಳದೇ ಯಡಿಯೂರಪ್ಪ ದೆಹಲಿಗೆ ಪ್ರಯಾಣಿಸಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ್ದಾಗಿ ತಿಳಿಸಿದ್ದಾರೆ.

ಬಿಜೆಪಿ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದೆ. ಬೀದರ್ ನ ಔರಾದ್ ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಕೇಂದ್ರ ಚುನಾವಣಾ ಸಮಿತಿ ಮೊದಲ ಸಭೆ ಹಿನ್ನೆಲೆಯಲ್ಲಿ ಜನಸಂಕಲ್ಪ ಯಾತ್ರೆ ಮೊಟಕುಗೊಳಿಸಿ ಬಂದಿದ್ದೇನೆ. ಇದು ಪ್ರಮುಖ ಸಭೆಯಾಗಿರುವುದರಿಂದ ಸಭೆಯಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.