ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದೇನು ಗೊತ್ತಾ?
ಧಾರರವಾಡ: ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬಗ್ಗೆ ನಮ್ಮ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಎಂಬುದನ್ನು ಕಾದು ನೋಡಬೇಕಾಗಿದೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೋ ಗೊತ್ತಿಲ್ಲ.
ನಮ್ಮ ಜೊತೆ ಜನಾರ್ಧನ ರೆಡ್ಡಿ ಮಾತನಾಡಿಲ್ಲ. ಇತ್ತೀಚಿಗೆ ಅವರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಹೀಗಾಗಿ ಅವರು ಹೊಸ ಪಕ್ಷ ಘೋಷಣೆಯ ಬಗ್ಗೆ ಮುನ್ಸೂಚನೆ ಇರಲಿಲ್ಲ ಎಂದು ತಿಳಿಸಿದರು.