ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ; ಮೂವರು 'LeT ಉಗ್ರರು' ಉಡೀಸ್

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಇಂದು ನಡೆದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯೋತ್ಪಾದಕರನ್ನ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ ಮತ್ತು ಪೊಲೀಸ್ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕನಿಷ್ಠ ಮೂವರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗ್ತಿದೆ.