ಜಾರ್ಖಂಡ್ನ ನರ್ಸಿಂಗ್ ಹೋಮ್ನಲ್ಲಿ ಅಗ್ನಿ ದುರಂತ: ಇಬ್ಬರು ವೈದ್ಯರು ಸೇರಿ ಐವರು ಸಾವು

ಧನ್ಬಾದ್: ಜಾರ್ಖಂಡ್ನ ಧನ್ಬಾದ್ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಇಂದು ಅಗ್ನಿ ದುರಂತ ಸಂಭವಿಸಿದ್ದು, ಇಬ್ಬರು ವೈದ್ಯರು ಸೇರಿ ಐವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರಲ್ಲಿ ವೈದ್ಯಕೀಯ ಸಂಸ್ಥೆಯ ಮಾಲೀಕ ಡಾ ವಿಕಾಸ್ ಹಜ್ರಾ, ಅವರ ಪತ್ನಿ ಡಾ ಪ್ರೇಮಾ ಹಜ್ರಾ, ಮಾಲೀಕರ ಸೋದರಳಿಯ ಸೋಹನ್ ಖಮಾರಿ ಮತ್ತು ಮನೆಯ ಸಹಾಯಕಿ ತಾರಾ ದೇವಿ ಸೇರಿದ್ದಾರೆ.
ರಾಂಚಿಯಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ಧನ್ಬಾದ್ನ ಬ್ಯಾಂಕ್ ಮೋರ್ ಪ್ರದೇಶದಲ್ಲಿನ ನರ್ಸಿಂಗ್ ಹೋಂ-ಕಮ್-ಪ್ರೈವೇಟ್ ಹೌಸ್ನ ಸ್ಟೋರ್ ರೂಮ್ನಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಟೋರ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿದ ಕಾರಣ ಮಾಲೀಕರು ಮತ್ತು ಅವರ ಪತ್ನಿ ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಧನ್ಬಾದ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಪ್ರೇಮ್ ಕುಮಾರ್ ತಿವಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.