ಜಿ.ಟಿ ದೇವೇಗೌಡರ ಐವರು ಆಪ್ತರು ಜೆಡಿಎಸ್ ಗೆ ರಾಜೀನಾಮೆ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ ದೇವೇಗೌಡರಿಗೆ ಆಪ್ತರಾಗಿದ್ದ ಐವರು ಮುಖಂಡರು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲಿದ್ದಾರೆ.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ಜಿಲ್ಲಾ ನಾಯಕ ಸಂಘದ ಅಧ್ಯಕ್ಷ ದೇವರಾಜು, ಬೆಳವಾಡಿ ಜೆಡಿಎಸ್ ,ಮುಖಂಡ ಶಿವಮೂರ್ತಿ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.
ಇಂದು ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ರಮನ್ನಹಳ್ಳಿ ಗ್ರಾಮದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಐವರು ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.