ಜಿಟಿ ದೇವೇಗೌಡಗೆ ಟಿಕೆಟ್ ನೀಡಿದ್ದಕ್ಕೆ ವಿರೋಧ: ಜೆಡಿಎಸ್ ತೊರೆದ ಎಚ್‌ಡಿಕೆ ನಿಷ್ಠಾವಂತರು

ಜಿಟಿ ದೇವೇಗೌಡಗೆ ಟಿಕೆಟ್ ನೀಡಿದ್ದಕ್ಕೆ ವಿರೋಧ: ಜೆಡಿಎಸ್ ತೊರೆದ ಎಚ್‌ಡಿಕೆ ನಿಷ್ಠಾವಂತರು
ಜೆಡಿಎಸ್ ಪಂಚರತ್ನ ಯಾತ್ರೆ ಆರಂಭಿಸಿರುವ ಬೆನ್ನಲ್ಲೇ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಪದಾಧಿಕಾರಿಗಳು, ಪ್ರಮುಖರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪ್ರತಿಭಟನೆ ನಡೆಸಿರುವುದು ಪಕ್ಷಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ.
ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಬಲ ಕ್ರೋಢೀಕರಣಕ್ಕಾಗಿ ಪಂಚರತ್ನ ಯಾತ್ರೆ ಆರಂಭಿಸಿರುವ ಬೆನ್ನಲ್ಲೇ ಮೈಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಪದಾಧಿಕಾರಿಗಳು, ಪ್ರಮುಖರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪ್ರತಿಭಟನೆ ನಡೆಸಿರುವುದು ಪಕ್ಷಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಬಂಡಾಯ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಸುವ ಪಕ್ಷದ ನಿರ್ಧಾರಕ್ಕೆ ಪಕ್ಷ ನಾಯಕರು ಅಸಮಾಧಾನಗೊಂಡಿದ್ದಾರೆಂದು ತಿಳಿದುಬಂದಿದೆ. ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ಬಂಡಾಯ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಭಿಮಾನ ಕಾರ್ಯಕರ್ತರ ಸಭೆ ನಡೆಸಿ, ಚುನಾವಣೆಯಲ್ಲಿ ದೇವೇಗೌಡ ಅವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ. ಈ ಹಿಂದೆ ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಎರಡರೊಂದಿಗೂ ಅವರು ಒಲವು ಹೊಂದಿದ್ದು, ಅವರಿಗೆ ಮತ್ತು ಅವರ ಪುತ್ರ ಹರೀಶ್ ಗೌಡ ಅವರಿಗೆ ವಿಧಾನಸಭೆ ಟಿಕೆಟ್ ನೀಡುವಂತೆ ಕೇಳಿದ್ದಾರೆ.

ಎರಡೂ ಪಕ್ಷಗಳಿಂದ ಯಾವುದೇ ಭರವಸೆ ಸಿಗದ ಕಾರಣ ಪಕ್ಷದ ವರಿಷ್ಠ ಎಚ್ಡಿ ದೇವೇಗೌಡರ ಮುಂದೆ ಮೊಸಳೆ ಕಣ್ಣೀರು ಸುರಿಸಿ ಪಕ್ಷಕ್ಕೆ ಮರಳಿದ್ದಾರೆ ಎಂದು ಆರೋಪಿಸಿದರು.