ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ
ದಾವಣಗೆರೆ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆಬ್ರವರಿಯಲ್ಲಿ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಈ ಬಗ್ಗೆ ಮಾತನಾಡಿ, ಜಿಪಂ, ತಾಪಂ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಮಿತಿ ರಚಿಸಲಾಗಿದ್ದು, ಜನವರಿಯಲ್ಲಿ ಸಮಿತಿ ವರದಿ ಸಲ್ಲಿಸಲಿದೆ.
ಕೋಟ್ಯಧಿಪತಿಗಳು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಹಲವು ಕಡೆಗಳಲ್ಲಿ ಪಕ್ಷಕ್ಕೆ ಸಂಬಂಧವಿಲ್ಲದವರನ್ನು ಕಣಕ್ಕಿಳಿಸಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಈಶ್ವರಪ್ಪ ಟೀಕಿಸಿದ್ದಾರೆ.