ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ: ಜಿಲ್ಲೆ ಹೊರಗೇ ಹುಟ್ಟುಹಬ್ಬದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಮಾಜಿ ಸಚಿವ ವಿನಯ್ ಕುಲಕರ್ಣಿ

ಧಾರವಾಡ: ಹುಟ್ಟುಹಬ್ಬದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ ನಿರ್ಧರಿಸಿದ್ದಾರೆ. ಕಿತ್ತೂರಿನಲ್ಲಿ ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಹುಟ್ಟುಹಬ್ಬದ ಅದ್ದೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ವಲಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿ.ಎಲ್.ಪಿ.
ಧಾರವಾಡ ಜಿಲ್ಲಾ ಪ್ರವೇಶಕ್ಕೆ ವಿನಯ ಕುಲಕರ್ಣಿ ಅವರಿಗೆ ನಿಬಂಧ ವಿಧಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಅವರಿಗೆ ನಿರ್ಬಂಧ ವಿಧಿಸಲಾಗಿದೆ.
ಸುಮಾರು ಒಂದು ಲಕ್ಷ ಜನರನ್ನು ಸೇರಿಸಿ ಕಿತ್ತೂರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆ. ಧಾರವಾಡ ಗ್ರಾಮಾಂತರ ಕ್ಷೇತ್ರದಿಂದಲೇ ಸ್ಪರ್ಧಿಸಲು ವಿನಯ್ ತಯಾರಿ ಮಾಡಿಕೊಂಡಿರುವ ಅವರು ಹುಟ್ಟುಹಬ್ಬದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.