ಜುಲೈ-ಸೆ. ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ 6.3% ಹೆಚ್ಚಳ: ವರದಿ

ಜುಲೈ-ಸೆ. ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ 6.3% ಹೆಚ್ಚಳ: ವರದಿ

ನವದೆಹಲಿ: ಭಾರತದ ಆರ್ಥಿಕತೆಯು ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇಕಡಾ 6.3 ರಷ್ಟು ಪ್ರಗತಿ ಸಾಧಿಸಿದೆ. ಹಿಂದಿನ ತ್ರೈಮಾಸಿಕದಲ್ಲಿ ಶೇಕಡಾ 13.5 ರಷ್ಟಿತ್ತು ಎಂದು ಬುಧವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳು ತಿಳಿಸಿವೆ. ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ 2021-22ರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ (GDP) 8.4 ರಷ್ಟು ವಿಸ್ತರಿಸಿದೆ.