ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿ- ಗಿನ್ನೆಸ್ ರೆಕಾರ್ಡ್ ಗೆ ಸಾಕ್ಷಿಯಾಗಲಿರುವ ಮೈಸೂರು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ. ಈ ಬಾರಿಯ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಇದೇ ಜೂನ್ 21 ರಂದು ಮೋದಿ ಮೈಸೂರಿಗೆ ಬರುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಲಯ ಖಚಿತ ಪಡಿಸಿದೆ.
ಯೋಗ ದಿನದಂದು ಇಡೀ ವಿಶ್ವದಲ್ಲೇ ಹೆಚ್ಚು ಯೋಗಪಟಗಳು ಯೋಗ ಪ್ರದರ್ಶನದಲ್ಲಿ ಭಾಗಿಯಾಗುತ್ತಿರುವ ಕಾರಣ ಮೈಸೂರನ್ನು ಮೋದಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ.
ಈ ಹಿಂದೆ ಪ್ರಧಾನ ಮಂತ್ರಿ ಮೋದಿ ಅವರನ್ನು ಯೋಗ ದಿನದಂದು ಮೈಸೂರಿಗೆ ಆಗಮಿಸುವಂತೆ ಆಹ್ವಾನಿಸಲಾಗಿತ್ತು.
ಆದರೆ ಬಂದಿರಲಿಲ್ಲ. ಪ್ರಧಾನಮಂತ್ರಿ ಮೈಸೂರಿಗೆ ಆಗಮಿಸವುದನ್ನು ಪ್ರತಾಪ್ ಸಿಂಹ ಟ್ವಿಟರ್ ನಲ್ಲಿ ಫೋಟೊ ಹಾಕಿ ಖಚಿತ ಪಡಿಸಿದ್ದಾರೆ.
ಈಗಾಗಲೇ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.