ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೌರಿಶಂಕರಿಗೆ ಕಂದಾಯ ಸಚಿವ ಹುದ್ದೆ ನಿಖಿಲ್ ಕುಮಾರಸ್ವಾಮಿ ಭರವಸೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೌರಿಶಂಕರಿಗೆ ಕಂದಾಯ ಸಚಿವ ಹುದ್ದೆ ನಿಖಿಲ್ ಕುಮಾರಸ್ವಾಮಿ ಭರವಸೆ

ತುಮಕೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೌರಿಶಂಕರಿಗೆ ಕಂದಾಯ ಸಚಿವ ಹುದ್ದೆ ನೀಡಲಾಗುತ್ತದೆ ಎಂಬುದಾಗಿ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳಗರೆಯಲ್ಲಿ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ಆಯೋಜಿಸಿದ ಜೆಡಿಎಸ್ ಜನತಾ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ.

ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮಾವೇಶವನ್ನು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು.

ಈ ಬಳಿಕ ಮಾತನಾಡಿದ ಅವರು ಇಂದು ನಡೆದ ಸಮಾವೇಶ ಇತಿಹಾಸ ನಿರ್ಮಾಣ ಮಾಡಿದ್ದು, ಶಾಸಕ ಡಿಸಿ ಗೌರಿಶಂಕರ್ ರವರ ಮೇಲಿನ ಪ್ರೀತಿ ವಿಶ್ವಾಸದ ಪ್ರತೀಕವಾಗಿದೆ ಎಂದು ಹೇಳಿದರು.

ಕ್ಷೇತ್ರದ ಮೂಲೆ ಮೂಲೆಯಿಂದ ಹಿರಿಯ ನಾಗರಿಕರು ಮಹಿಳೆಯರು ಯುವಕರು ಆಗಮಿಸಿದ್ದು ಈ ಬಾರಿ ಗೌರಿಶಂಕರ್ ಗೆಲುವು ನಿಶ್ಚಿತ ಎಂದರು.

ಮಾಜಿ ಶಾಸಕ ಬಿ ಸುರೇಶ್ ಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕಳೆದ ಲೋಕಸಭಾ ಚುನಾವಣೆ ವೇಳೆ ದೇವೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಅವರಿಗೆ ತಕ್ಕ ಪಾಠ ಕಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮಾಜಿ ಸಿಎಂ ಕುಮಾರಸ್ವಾಮಿಯವರು ರಾಜ್ಯದ ರೈತರು ಸಾಮಾನ್ಯ ಜನರ ಅಭ್ಯುದಯಕ್ಕಾಗಿ ಪಂಚರತ್ನ ಯೋಜನೆಯನ್ನು ರೂಪಿಸಿ. ಈಗಾಗಲೇ 85ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಾ ಪಂಚ ರತ್ನ ಯೋಜನೆಗಳ ಬಗ್ಗೆ ಪ್ರಚಾರ ನಡೆಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದಲ್ಲಿ ಶಾಸಕ ಗೌರಿಶಂಕರ್ ಕಂದಾಯ ಮಂತ್ರಿ ಆಗಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ, ಶಾಸಕ ಗೌರಿಶಂಕರ್ ಸಂಸ್ಕಾರವಂತ ಯುವಕ ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಶಾಸಕರು ಮಾಡಿದಂತಹ ಜನ ಉಪಯೋಗಿ ಕೆಲಸವನ್ನು ಮಾಡಿ ಕ್ಷೇತ್ರದ ಜನರ ಮನ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೌರಿಶಂಕರ್ ಗೆಲುವು ಕ್ಷೇತ್ರದ ಜನರ ಗೆಲುವು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಡಿಸಿ ಗೌರಿಶಂಕರ್ ನಾನು ಕ್ಷೇತ್ರದ ಶಾಸಕನಾಗಿ ಎಂದು ಕೆಲಸ ಮಾಡಿಲ್ಲ. ಬದಲಾಗಿ ಕ್ಷೇತ್ರದ ಪ್ರತಿಯೊಂದು ಮನೆಯ ಮಗನಾಗಿ ಕಾರ್ಯನಿರ್ವಸುತ್ತಿದ್ದೇನೆ. ನನ್ನ ಅಧಿಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ 2.800 ಕೋಟಿ ರೂಗಳ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ವಿಶೇಷವಾಗಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ವೃಷಭ ಭಾರತಿ ನೀರನ್ನು ತಾಲ್ಲೂಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಿರುವುದಾಗಿ ತಿಳಿಸಿದರು