ಜೆಡಿಎಸ್' ನ ಮತ್ತೊಂದು ವಿಕೆಟ್ ಪತನ : ಶೀಘ್ರವೇ ಶಾಸಕ ಕೆ.ಸಿ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್' ನ ಮತ್ತೊಂದು ವಿಕೆಟ್ ಪತನ : ಶೀಘ್ರವೇ ಶಾಸಕ ಕೆ.ಸಿ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ

ಚಾಮರಾಜನಗರ : ಚುನಾವಣೆ ಹೊತ್ತಲ್ಲೇ ಜೆಡಿಎಸ್ ಪಕ್ಷ ಮತ್ತೊಂದು ವಿಕೆಟ್ ಪತನವಾಗಿದ್ದು, ಶೀಘ್ರವೇ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಯಣ ಮಾಹಿತಿ ನೀಡಿದ್ದು, ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಅವರೂ ಕೂಡ ಕಾಂಗ್ರೆಸ್ ಗೆ ಸೇರಲು ಸಿದ್ಧರಿದ್ದಾರೆ.

ಇನ್ನು ಜೆಡಿಎಸ್‌ನಲ್ಲಿ ಸುದೀರ್ಘ ರಾಜಕಾರಣ ಮಾಡಿಕೊಂಡು ಬಂದಿರುವ ಶಾಸಕ ಕೆ. ಎಂ. ಶಿವಲಿಂಗೇಗೌಡರ ವಿರುದ್ಧ ಪಕ್ಷದ ವರಿಷ್ಠರಾದ ಎಚ್‌. ಡಿ. ದೇವೇಗೌಡ ಹಾಗೂ ಎಚ್‌. ಡಿ. ಕುಮಾರಸ್ವಾಮಿ ಬಹಿರಂಗವಾಗಿಯೇ ಅಪಸ್ವರದ ಮಾತುಗಳನ್ನಾಡಿದ್ದರು. ಈ ಎಲ್ಲ ಹಿನ್ನೆಲೆಯಲ್ಲಿ ಜೆಡಿಎಸ್ ಗೆ ರಾಜೀನಾಮೆ ಕೊಟ್ಟು ಕೆ.ಎಂ.ಶಿವಲಿಂಗೇಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ