ಜೆಡಿಎಸ್ ನಾಯಕ ಬೆಮಲ್ ಕಾಂತರಾಜು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಜನವರಿ 21; ತುಮಕೂರು ಜಿಲ್ಲೆಯ ಪ್ರಭಾವಿ ಜೆಡಿಎಸ್ ನಾಯಕ ಬೆಮಲ್ ಕಾಂತರಾಜು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈಗಾಗಲೇ ಹಲವು ಜೆಡಿಎಸ್‌ನ ಹಲವು ನಾಯಕರು ಕಾಂಗ್ರೆಸ್ ಸೇರಿದ್ದು, ಈ ಪಟ್ಟಿಗೆ ಬೆಮಲ್ ಕಾಂತರಾಜು ಸೇರಿದ್ದಾರೆ.
ಜೆಡಿಎಸ್ ನಾಯಕ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಬೆಮಲ್ ಕಾಂತರಾಜು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.