ಜೆಡಿಎಸ್ ಪಂಚರತ್ನ ಯಾತ್ರೆ; ಮೊದಲ ಹಂತದ ಪಟ್ಟಿ ಬಿಡುಗಡೆ

ಜೆಡಿಎಸ್ ಪಂಚರತ್ನ ಯಾತ್ರೆ; ಮೊದಲ ಹಂತದ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ನವೆಂಬರ್ 1ರಿಂದ ಪಂಚರತ್ನ ಯಾತ್ರೆ ಆರಂಭವಾಗಲಿದೆ.

ಮೊದಲ ಹಂತದ ಪಂಚರತ್ನ ಯಾತ್ರೆ ಪಟ್ಟಿಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ.

ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ ಸೇರಿದಂತೆ ಪಂಚರತ್ನ ಯಾತ್ರೆಯಲ್ಲಿ ಈ ನಿಟ್ಟಿನಲ್ಲಿ ಯೋಜನೆ ರೋಪಿಸಲಾಗಿದೆ.

ನವೆಂಬರ್ 1ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲುನಿಂದ ರಥಯಾತ್ರೆ ಆರಂಭವಾಗಲಿದೆ.

ನವೆಂಬರ್ 6ರಿಂದ 10ರವರೆಗೆ ಚಿಕ್ಕಬಳ್ಳಾಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ನ.11ರಿಂದ 13ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಸಾಗಲಿದೆ.

ನ.14ರಿಂದ 23ವರೆಗೆ ತುಮಕೂರು ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.

ನ.24ರಿಂದ 30ರವರೆಗೆ ಹಾಸನ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.

ಡಿ.1ರಂದು ಕುಣಿಗಲ್ ಕ್ಷೇತ್ರದಲ್ಲಿ

ಡಿ.2ರಿಂದ 5ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.

ಮೊದಲ ಹಂತದಲ್ಲಿ ಒಟ್ಟು 35 ದಿನಗಳ ಕಾಲ ಪಂಚರತ್ನ ಯಾತ್ರೆ ಸಾಗಲಿದೆ. ಪಂಚರತ್ನ ಯಾತ್ರೆ ಸಂದರ್ಭದಲ್ಲಿಯೇ ಜೆಡಿಎಸ್ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.