ಜೆಡಿಎಸ್ ಕದ ತಟ್ಟುತ್ತಿರುವ ಕಾಂಗ್ರೆಸ್, ಬಿಜೆಪಿ ನಾಯಕರು: ದೇವೇಗೌಡ

ಹಾಸನ: ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಜೆಡಿಎಸ್ ಕಥೆ ಮುಗಿದೇ ಹೋಗಿರುತ್ತದೆ ಎಂದು ಹೇಳುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರೇ ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.
ನಗರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ವರ್ಚಸ್ಸನ್ನು ಯಾರಿಂದಲೂ ಕಡಿಮೆ ಮಾಡಲು ಸಾಧ್ಯವಿಲ್ಲ. ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶುರುವಾಗಿದೆ ಎಂದರು.
ಹಾಸನದಿಂದ ಜೆಡಿಎಸ್ ಅಭ್ಯರ್ಥಿ ಆಯ್ಕೆಯ ಹೊಣೆಯನ್ನು ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ. ರೇವಣ್ಣ ಅವರ ನಿರ್ಧಾರಕ್ಕೆ ಮುಖಂಡರು ವಹಿಸಿದರು. ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳ ಪ್ರಕಾರ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅಥವಾ ಪುತ್ರ ಡಾ| ಸೂರಜ್ ರೇವಣ್ಣ ಅವರು ಅಭ್ಯರ್ಥಿಯಾಗುವುದು ಖಚಿತವಾಗಿದೆ.