ಬೆಳಗಾವಿ : ವಿಧಾನಪರಿಷತ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಧಾರವಾಡ ಜಿಲ್ಲೆಯ ಜಾತ್ಯತಿತ ಜನತಾ ದಳದ(JDS) ಪ್ರಮುಖ ನಾಯಕರಾಗಿದ್ದ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೋನರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಕೋನರೆಡ್ಡಿ, ನನ್ನ ಕ್ಷೇತ್ರದ ಮತದಾರರ ಒತ್ತಾಯದ ಮೇರೆಗೆ ಕಾಂಗ್ರೆಸ್ ಸೇರಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲಾವಕಾಶ ಇದೆ. ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬಿಡೋದು ಹಿರಿಯರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.