ಎಚ್.ಡಿ.ರೇವಣ್ಣರ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ! ಎ.ಟಿ.ರಾಮಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ

ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣರ ಮನೆಗೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ಶನಿವಾರ ನಡೆಯಿತು.
ಹೊಳೆನರಸೀಪುರದಲ್ಲಿರುವ ರೇವಣ್ಣರ ಮನೆ ಮುಂದೆ ಜಮಾಯಿಸಿದ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿಚಾರವಾಗಿ ಸಜ್ಜನ ರಾಜಕಾರಣಿ ಎ.ಟಿ.ರಾಮಸ್ವಾಮಿ ವಿರುದ್ಧ ತಿರುಗಿಬಿದ್ದರು.
ಎ.ಟಿ.ರಾಮುಸ್ವಾಮಿ ಅವರು ಜೆಡಿಎಸ್ ತೊರೆಯುತ್ತಾರೆ ಎಂಬ ಸುದ್ದಿ ಬಾರೀ ಸದ್ದು ಮಾಡಿತ್ತು. ರಾಮಸ್ವಾಮಿ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಜೆಡಿಎಸ್ನ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೆಲ ದಿನಗಳ ಹಿಂದಷ್ಟೇ ರಾಮಸ್ವಾಮಿ ಅವರ ಜತೆ ಮಾತುಕತೆ ನಡೆಸಿದ್ದ ರೇವಣ್ಣ ಎಲ್ಲವೂ ಸರಿ ಮಾಡಿದ್ದರು. ಆದರೆ, ಇಂದು ಬೆಳಗ್ಗೆ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ರೇವಣ್ಣರ ಮನೆಗೆ ಮುತ್ತಿಗೆ ಹಾಕಿ ರಾಮಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.