ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ರೇವಣ್ಣ ಅಡ್ಡಿ: ಹೆಚ್‌ಡಿಕೆ
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸುವ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಕರಾರು ಎತ್ತಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ. ಪಟ್ಟಿ ಬಿಡುಗಡೆಗೆ ಇಂದು ಸಮಯ ಪ್ರಸಕ್ತವಾಗಿಲ್ಲ ಎಂದಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.