ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ. ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತವರ್ಗವನ್ನು ಹೊಂದಿದ್ದಾರೆ.