ಜೈಲು ಸೇರಿದ್ದ ಸ್ವಾಮೀಜಿ ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಸೇಬಿನ ಹಾರ ಹಾಕಿ ಅದ್ದೂರಿ ಸ್ವಾಗತ.!
ಕಂಚುಗಲ್ ಬಂಡೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿಯವರ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಜೈಲು ಸೇರಿದ್ದರು.
ಜನವರಿ 13ರಂದು ಹೈಕೋರ್ಟ್ ನಲ್ಲಿ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಬುಧವಾರದಂದು ಅವರು ರಾಮನಗರ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
ಮೃತ್ಯುಂಜಯ ಸ್ವಾಮೀಜಿ ಜೈಲಿನಿಂದ ಹೊರ ಬರುತ್ತಿದ್ದಂತೆ ಅವರ ಭಕ್ತರು ಸೇಬಿನ ಹಾರ ಹಾಗೂ ಗುಲಾಬಿ ಹಾರ ಹಾಕಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.