ಜ್ಞಾನ ವಾಹಿನಿಗಳನ್ನು ಕನ್ನಡದಲ್ಲೂ ಪ್ರಸಾರ ಮಾಡಲು ಮನವಿ

ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್, ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ, ಪ್ರಸಾರ ಖಾತೆಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ. ಈ ವಾಹಿನಿಗಳು ತಮಿಳು, ತೆಲುಗು, ಹಿಂದಿಯಲ್ಲಿ ಪ್ರಸಾರವಾಗುತ್ತಿವೆ. ಕನ್ನಡಿಗರಿಗೆ ಜಗತ್ತಿನ ವಿಸ್ಮಯಗಳನ್ನು ತಮ್ಮ ಭಾಷೆಯಲ್ಲಿ ತಿಳಿದುಕೊಳ್ಳುವ ಅವಕಾಶ ಒದಗಿಸಲು ತಿಳಿಸುವಂತೆ ಸಚಿವ ವಿ.ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ.