ಝಿಕಾ ವೈರಸ್‌ ಭೀತಿ; ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಝಿಕಾ ವೈರಸ್‌ ಭೀತಿ; ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ರಾಯಚೂರಿನಲ್ಲಿ ಝಿಕಾ ವೈರಸ್‌ ಸೋಂಕು ಪತ್ತೆಯಾಗಿರುವುದು ರಾಜ್ಯದಲ್ಲಿ ಆತಂಕ ಮೂಡಿಸಿದೆ. ಸೋಂಕಿನ ಬಗ್ಗೆ ಎಚ್ಚೆತ್ತಿರುವ ಆರೋಗ್ಯ ಇಲಾಖೆ, ವೈರಸ್‌ಗೆ ಚಿಕಿತ್ಸಾ ಕ್ರಮ ಬಿಡುಗಡೆ ಮಾಡಿದೆ. 'ಸೌಮ್ಯ ‌ಗುಣಲಕ್ಷಣ ಇರುವ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ಅಗತ್ಯವಿಲ್ಲ. ಝಿಕಾ ವೈರಸ್‌ಗೆ ಸಾಮಾನ್ಯ ಮೈಕೈ ನೋವು, ಜ್ವರಕ್ಕೆ ನೀಡುವ ಚಿಕಿತ್ಸೆ ನೀಡಬಹುದು. ರೋಗ ಲಕ್ಷಣಗಳಿರುವ ರೋಗಿಗಳಿಗೆ ವೈದ್ಯಕೀಯ ಸಲಹೆ ಪಡೆದುಕೊಂಡೇ ಚಿಕಿತ್ಸೆ ನೀಡಬೇಕು ಎಂದಿದೆ. ಸದ್ಯಕ್ಕೆ ಝಿಕಾ ವೈರಸ್‌ಗೆ ವ್ಯಾಕ್ಸಿನ್ ಇಲ್ಲ.