ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಅಂತಿಮ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ನಾಯಕ ಶಕಿಬ್ ಅಲ್ ಹಸನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕುಲ್ದೀಪ್ ಯಾದವ್ ಅಲಭ್ಯರಾಗಿದ್ದು ಇವರ ಬದಲು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತ ಬಾಂಗ್ಲಾ ಪಡೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.