ಟಿ20; ಈ ಸರಣಿಯಿಂದ ಹಾರ್ದಿಕ್ ಖಾಯಂ ನಾಯಕ?

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾದ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಹೀಗಾಗಿ ಅವರನ್ನು ಟಿ20 ತಂಡದ ಖಾಯಂ ನಾಯಕನನ್ನಾಗಿ ಮಾಡಬೇಕೆಂಬ ಬೇಡಿಕೆ ಇದೆ. ಜೊತೆಗೆ ಈ ಬಗ್ಗೆ ಆಯ್ಕೆ ಸಮಿತಿ ಸದಸ್ಯರಲ್ಲಿ ಒಮ್ಮತ ಮೂಡಿದೆ. ಹೀಗಾಗಿ ರೋಹಿತ್ ಶರ್ಮಾ ಟಿ20 ನಾಯಕತ್ವ ಕಳೆದುಕೊಳ್ಳಲಿದ್ದಾರೆ. ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮೊದಲು ಹಾರ್ದಿಕ್ ಪಾಂಡ್ಯ ಅವರನ್ನು ಟಿ20 ತಂಡದ ಖಾಯಂ ನಾಯಕನಾಗಿ ಆಯ್ಕೆ ಮಾಡಲಾಗುವುದು ಎನ್ನಲಾಗಿದೆ.