ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಕೋರ್ಟ್ ತಡೆ

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ರಚಿಸಿದ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಸಿಟಿ ಸಿವಿಲ್ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ. ಟಿಪ್ಪು ನಾಟಕ ಪ್ರದರ್ಶನಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಕೋರ್ಟ್ ಹೇಳಿದೆ. ಪುಸ್ತಕವು ಕೋಮು, ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದೆ. ಲೇಖಕರು ಹೇಳಿದ ವಿಷಯಗಳಿಗೆ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ ಎಂದು ಕೋರ್ಟ್ ಹೇಳಿದೆ.