ಟಿಪ್ಪುವನ್ನು ಹೊಗಳಿದ ಮಾಜಿ ರಾಷ್ಟ್ರಪತಿ 'ಕೋವಿಂದ್' ರನ್ನು ಹೊಡೆದು ಹಾಕ್ತೀರಾ..? : ಸಿ.ಎಂ ಇಬ್ರಾಹಿಂ

ವಿಜಯಪುರ : ಟಿಪ್ಪು ಸುಲ್ತಾಲ್ ನನ್ನು ಹೊಗಳಿದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಹೊಡೆದು ಹಾಕ್ತೀರಾ..? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.
ಚುನಾವಣೆ ಬಗ್ಗೆ ಮಾತನಾಡುವುದಕ್ಕೆ ಸಾಕಷ್ಟು ವಿಷಯಗಳಿದೆ. ಅದನ್ನು ಬಿಟ್ಟು ಇಂತಹ ಹೇಳಿಕೆ ಕೊಡಬಾರದು, ಸಿದ್ದರಾಮಯ್ಯ ಬೇರೆ ಪಕ್ಷ ಇರಬಹುದು, ಆದರೆ ವಿಪಕ್ಷ ನಾಯಕರು ಅವರು. ಇಂತಹ ಹೇಳಿಕೆ ನೀಡಬಾರದು. ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದರೆ ಒಂದು ತೂಕ ಬರುತ್ತದೆ ಎಂದರು.
ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಸಚಿವ ಅಶ್ವಥ್ ನಾರಯಣ್ ಅವರು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಮಾತನಾಡುತ್ತ, ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.
ಇದೇ ವೇಳೆ ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.