ಟಿಪ್ಪು ಸುಲ್ತಾನ್ ಗೆ ಹೊಡೆದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು : ಅಶ್ವತ್ಥ್ ನಾರಾಯಣ ವಿವಾದಾತ್ಮಕ ಹೇಳಿಕೆ

ಮಂಡ್ಯ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಈ ನಡುವೆ ಬಿಜೆಪಿ- ಕಾಂಗ್ರೆಸ್ ನಾಯಕ ನಡುವೆ ಮಾತಿನ ವಾಕ್ಸಮರ ಉಂಟಾಗಿದೆ.
ಕಾಂಗ್ರೆಸ್ ಮೊದಲಿನಿಂದಲೂ ಟಿಪ್ಪು ಪರವಾಗಿ ಮಾತನಾಡುತ್ತಲೇ ಬಂದಿದ್ರೆ, ಬಿಜೆಪಿ ಆತ ಒಬ್ಬ ದೇಶದ್ರೋಹಿ ಎಂದು ವಿರೋಧಿಸುತ್ತಲೇ ಬಂದಿದೆ.
ಮಂಡ್ಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಬಳಿ ನಿಮಗೆ ಸಾವರ್ಕರ್ ಬೇಕಾ? ಟಿಪ್ಪು ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಾವರ್ಕರ್ ಬೇಕು ಎಂಬ ಉತ್ತರ ಬಂದಿದ್ದೆ. ಹೀಗಾಗಿ ಈ ಹೇಳಿಕೆ ನೀಡಿದ್ದಾರೆ.ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದಾರೆ