ಟೂರಿಸ್ಟ್ ಸಿಎಂ ನೋಡಿ ಅಯ್ಯೋ ಪಾಪ ಎನಿಸುತ್ತಿದೆ: ಕಾಂಗ್ರೆಸ್‌ ವ್ಯಂಗ್ಯ

ಟೂರಿಸ್ಟ್ ಸಿಎಂ ನೋಡಿ ಅಯ್ಯೋ ಪಾಪ ಎನಿಸುತ್ತಿದೆ: ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ದೆಹಲಿ ಟೂರಿಸ್ಟ್ ಸಿಎಂ ಬೊಮ್ಮಾಯಿ ಅವರನ್ನು ನೋಡಿ ಅಯ್ಯೋ ಪಾಪ ಎನಿಸುತ್ತಿದೆ ! ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ. ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ ಮಾಡುತ್ತೇನೆ ಎಂದಿದ್ದ ಬೊಮ್ಮಾಯಿ ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ? ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ? ಬೊಮ್ಮಾಯಿಯವರು ಅಷ್ಟು ಅಸಮರ್ಥರೆ? ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ? ಎಂದು ಕೇಳಿದೆ.