ಗಾರ್ಡನ್ ಸಿಟಿ ಬೆಂಗಳೂರನ್ನು ಗಾಂಜಾ ಸಿಟಿ ಮಾಡಿದ್ದೇ ಬಿಜೆಪಿ ಸರ್ಕಾರದ ಸಾಧನೆ : ಟ್ವಿಟರ್ ನಲ್ಲಿ ಕಾಂಗ್ರೆಸ್ ವಾಗ್ದಾಳಿ

ಗಾರ್ಡನ್ ಸಿಟಿ ಬೆಂಗಳೂರನ್ನು ಗಾಂಜಾ ಸಿಟಿ ಮಾಡಿದ್ದೇ ಬಿಜೆಪಿ ಸರ್ಕಾರದ ಸಾಧನೆ : ಟ್ವಿಟರ್ ನಲ್ಲಿ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು : ಗಾರ್ಡನ್ ಸಿಟಿ ಬೆಂಗಳೂರನ್ನು ಗಾಂಜಾ ಸಿಟಿ ಎಂಬ ಕುಖ್ಯಾತಿಗೆ ತಳ್ಳಿದ್ದೇ ಬಿಜೆಪಿ ಸರ್ಕಾರದ ಸಾಧನೆ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,ಗಾರ್ಡನ್ ಸಿಟಿ ಎಂಬ ಬೆಂಗಳೂರಿನ ಖ್ಯಾತಿಯನ್ನು ಗಾಂಜಾ ಸಿಟಿ ಎಂಬ ಕುಖ್ಯಾತಿಗೆ ತಳ್ಳಿದ್ದೇ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ.

ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬರುತ್ತಿದ್ದರು, ಇಂದು ಗಾಂಜಾ, ಡ್ರಗ್ಸ್ ವ್ಯಾಪಾರಕ್ಕಾಗಿ ಬರುತ್ತಿದ್ದಾರೆ. ಮೊನ್ನೆಯಷ್ಟೇ ಜಪ್ತಿಯಾದ ಒಂದು ಲೋಡ್ ಗಾಂಜಾವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.