ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತ: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ

ನಡೆದಾಡುವ ದೇವರು ಎಂದು ಖ್ಯಾತಿ ಹೊಂದಿದ್ದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಂದು ಅಸ್ತಂಗತರಾಗಿದ್ದಾರೆ. ಈ ಕುರಿತಾಗಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಓಂ ಶಾಂತಿಃ ಎಂದು ಕಂಬನಿ ಮಿಡಿದಿದ್ದಾರೆ.