ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತ: 81.77ಕ್ಕೆ ಇಳಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ 6 ಪೈಸೆ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ 81.77 ಕ್ಕೆ ತಲುಪಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿರುವುದು ಮತ್ತು ತಾಜಾ ವಿದೇಶಿ ನಿಧಿಯ ಒಳಹರಿವು ರೂಪಾಯಿ ಮೌಲ್ಯ ಕುಸಿತದ ಮೇಲೆ ಪರಿಣಾಮ ಬೀರಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.