ಡಿ.17ಕ್ಕೆ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ
ದಿವಂಗತ ನಟ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಮೈಸೂರಿನಲ್ಲಿ 5 ಎಕರೆ ಜಾಗದಲ್ಲಿ ನಿರ್ಮಿಸಲಾಗಿರುವ ವಿಸ್ಣುವರ್ಧನ್ ಸ್ಮಾರಕ ಡಿ.17ರಂದು ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಡಿ.17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಷ್ಣುವರ್ಧನ್ ಸ್ಮಾರಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಆ ದಿನ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಂದು ವಿಷ್ಣುವರ್ಧನ್ ಕುಟುಂಬ ಅಭಿಮಾನಿಗಳೊಂದಿಗೆ ಸಮಯ ಕಳೆಯಲಿದೆ ಎಂದು ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ್ ಹೇಳಿದ್ದಾರೆ