ಡಿ. 11ರಂದು ಮಹಾರಾಷ್ಟ್ರ, ಗೋವಾಕ್ಕೆ ಮೋದಿ ಭೇಟಿ; ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಚಾಲನೆ

ಡಿ. 11ರಂದು ಮಹಾರಾಷ್ಟ್ರ, ಗೋವಾಕ್ಕೆ ಮೋದಿ ಭೇಟಿ; ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಡಿ. 11ರಂದು ಮಹಾರಾಷ್ಟ್ರಮತ್ತು ಗೋವಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಮೊದಲು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಮೋದಿ, ನಾಗಪುರ ಮತ್ತು ಬಿಲಾಸ್ಪುರ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಚಾಲನೆ ನೀಡಲಿದ್ದಾರೆ. ಬಳಿಕ ನಾಗ್ಪುರದಲ್ಲಿ 1,500 ಕೋಟಿ ರೂ.ಗೂ ಹೆಚ್ಚು ಮೊತ್ತದ ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.