ಡಿ. 1ರಿಂದ ರಾಜ್ಯಾದ್ಯಂತ ಸಂಚರಿಸಲಿದೆ ಕನ್ನಡ ತೇರು

ಹಾವೇರಿ: ಅಖಿಲ ಭಾರತ 86 ನೇ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಸಾಹಿತ್ಯ ಸಮ್ಮೇಳನ ಅಭೂತಪೂರ್ವಗೊಳಿಸಲು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹಾವೇರಿ ಜಿಲ್ಲಾಡಳಿತ ಶ್ರಮಿಸುತ್ತಿದೆ. ಇದೇ ಪ್ರಥಮ ಬಾರಿಗೆ ಸಾಹಿತ್ಯ ಪರಿಷತ್ ರಾಜ್ಯಾದ್ಯಂತ ಕನ್ನಡತಾಯಿಯ ರಥ ಯಾತ್ರೆ ನಡೆಸಲು ಮುಂದಾಗಿದೆ. ಡಿ. 1ರಂದು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಭುವನಗಿರಿಯ ಭುವನೇಶ್ವರಿ ದೇವಸ್ಥಾನದಿಂದ ರಥಯಾತ್ರೆ ಆರಂಭವಾಗಲಿದೆ.