ಡಿ.21ರಂದು 'ವೈದ್ಯರ ನೇಮಕ'ಕ್ಕೆ 'ನೇರ ಸಂದರ್ಶನ'

ಡಿ.21ರಂದು 'ವೈದ್ಯರ ನೇಮಕ'ಕ್ಕೆ 'ನೇರ ಸಂದರ್ಶನ'

ಶಿವಮೊಗ್ಗ : ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿಗೆ 03 ವೈದ್ಯರ ಹುದ್ದೆಗಳು  ಮಂಜೂರಾಗಿದ್ದು, ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ನೇಮಕ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ  ಏರ್ಪಡಿಸಲಾಗಿದೆ.

ಡಿಸೆಂಬರ್ 21 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ನೇರ ಸಂದರ್ಶನವಿದ್ದು, ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳು ಮತ್ತು ಅವುಗಳ ದೃಢೀಕೃತ ನಕಲುಗಳ ಒಂದು ಪ್ರತಿ, ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗಬೇಕು.ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂ.ಸಂ: 08182-222382 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.