ಡಿ.23ರಂದು ಸುವರ್ಣ ಸೌಧದ ಎದುರು ಶುಶ್ರೂಷಕ/ಶುಶ್ರೂಷಕಿಯರುಗಳ ಧರಣಿ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, ಕರ್ನಾಟಕ ರಾಜ್ಯಾದ್ಯಂತ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ, 9,000 ಶುಶ್ರೂಷಕ/ಶುಶ್ರೂಷಕಿಯರುಗಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ, ಡಿಸೆಂಬರ್ 23ರಂದು, ಬೆಳಗಾವಿಯ ಸುವರ್ಣ ಸೌಧದ ಎದುರು, ಕರ್ನಾಟಕ ರಾಜ್ಯ ಶುಶ್ರೂಷಕ/ಶುಶ್ರೂಷಕಿಯರುಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಕೇತಿಕ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.ಇದೇ ಸಂದರ್ಭದಲ್ಲಿ ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡುವ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.