ಡಿ.31 2023ರವರೆಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್'ಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಂಬಡ್ತಿ ಸೇರಿದಂತೆ ವಿವಿಧ ಬಡ್ತಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿತ್ತು. ಒಂದು ವೇಳೆ ಪಾಸ್ ಆಗದಿದ್ದರೇ ಮುಂಬಡ್ತಿಗೆ ತಡೆಯನ್ನು ನೀಡಲಾಗುವುದೆಂದು ಹೇಳಿತ್ತು. ಈ ಪರೀಕ್ಷೆಯನ್ನು ದಿನಾಂಕ 31-12-2023ರೊಳಗೆ ಪಾಸ್ ಮಾಡಲು ಅವಕಾಶ ನೀಡಲಾಗಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಈ ಹಿಂದೆ ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮುಕ್ತಾಯಗೊಳಿಸಲು ದಿನಾಂಕ 31-12-2022ರವರೆಗೆ ಅವಕಾಶ ನೀಡಲಾಗಿತ್ತು. ಈ ಅವಧಿಯನ್ನು ದಿನಾಂಕ 31-12-2023ರ ವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.
ಕರ್ನಾಟಕ ನಾಗರೀಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು 2023 ಎಂದು ಕರೆಯತಕ್ಕದ್ದು. ಈ ನಿಯಮ 2ರಲ್ಲಿ ದಿನಾಂಕ 31-12-2022ರೊಳಗೆ ಎಂಬ ಪದ ಮತ್ತು ಅಂಕಿಗಳ ಬದರಿಗೆ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ಪ್ರತಿಸ್ಥಾಪಿಸತಕ್ಕದ್ದು ಎಂದಿದ್ದಾರೆ.