ಡಿಕೆಶಿ ಹೇಳಿಕೆ ಖಂಡಿಸಿ ಡಿ.19ರಿಂದ ಮೂರು ದಿನ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಕೇಸ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತಪಟ್ಟಿ ಅಕ್ರಮ & ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಮಾಡಿಸಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆ ಬಿಜೆಪಿ ಡಿಕೆಶಿ ಹೇಳಿಕೆ ಖಂಡಿಸಿ ಡಿ.19, 20, 21ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನಿಸಿದೆ.