ಡಿಜಿಟಲ್ ಮಾಧ್ಯಮ ಮತ್ತು ಪತ್ರಕರ್ತರಿಗೆ ಮಾನ್ಯತೆ: ಠಾಕೂರ್

ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ' ಎಂದು ಕೇಂದ್ರ ಮಾಹಿತಿ & ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಅಲ್ಲದೇ, ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆ ಚಿಂತಿಸಲಾಗುತ್ತಿದೆ. ಸದ್ಯ ದೇಶದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಹೊಸ ಕಾನೂನು ಅವಶ್ಯಕ ಎಂದು ಹೇಳಿದ್ದಾರೆ.